Homeಅಪರಾಧ ಸುದ್ದಿಮದುವೆ ಸಂಭ್ರಮ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ

ಮದುವೆ ಸಂಭ್ರಮ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ

ತಿಪಟೂರು ಸಮಾಚಾರ : ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದ ಎದುರು ಭಾನುವಾರ ಬೆಳಗಿನ ಜಾವ ಸಂಭವಿಸಿದೆ.

ತಾಲ್ಲೂಕಿನ ಬೈರನಾಯಕನಹಳ್ಳಿ ಗ್ರಾಮದ ಸಂಜು (23) ಹಾಗೂ ಹರ್ಷ (23) ಮೃತಪಟ್ಟ ಯುವಕರು.

ಇಬ್ಬರೂ ಮದುವೆ ಸಮಾರಂಭ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಾಲಾಜಿ ಕಲ್ಯಾಣ ಮಂಟಪದ ಎದುರು ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮೃತ ಹರ್ಷ ಎಂಬಿಎ ಪದವೀಧರನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ಯುವ ವಯಸ್ಸಿನಲ್ಲೇ ಉದ್ಯೋಗ ಪಡೆದು ಜೀವನ ರೂಪಿಸಿಕೊಳ್ಳುತ್ತಿದ್ದ ಹರ್ಷನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಮೂಡಿಸಿದೆ.

ಮದುವೆ ಸಂಭ್ರಮ ಮುಗಿಸಿ ಸುರಕ್ಷಿತವಾಗಿ ಮನೆ ಸೇರಬೇಕಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವುದು ಬೈರನಾಯಕನಹಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

ಘಟನೆಗೆ ಸಂಬಂಧಿಸಿದಂತೆ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Tumakuru samachara

Most Popular

Recent Comments